HomeKarnatakaKSRTCಗೆ ಮಧ್ಯಪ್ರದೇಶದ ನಾಯಕತ್ವ ಪ್ರಶಸ್ತಿಯ ಗರಿ

KSRTCಗೆ ಮಧ್ಯಪ್ರದೇಶದ ನಾಯಕತ್ವ ಪ್ರಶಸ್ತಿಯ ಗರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಎಸ್.ಆರ್.ಟಿ.ಸಿ.) ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಮಧ್ಯಪ್ರದೇಶದ ನಾಯಕತ್ವ ಪ್ರಶಸ್ತಿ ಪಡೆದುಕೊಂಡಿದೆ.

ಇಂದೋರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಲ್ಡ್ ಸಿಎಸ್ ಆರ್ ಡೇ ಮತ್ತು ವರ್ಲ್ಡ್ ಸಸ್ಟೈನೆಬಿಲಿಟಿ ಸಂಸ್ಥಾಪಕ ಡಾ. ಆರ್.ಎಲ್. ಭಾಟಿಯಾ, ಫನ್ ಅಂಡ್ ಜಾಯ್ ಸಿಇಒ ಡಾ. ಅಲೋಕ್ ಪಂಡಿತ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಮುಖ್ಯ ಸಂಚಾರ ವ್ಯವಸ್ಥಾಪಕ(ಕಾರ್ಯಾಚರಣೆ) ಜೆಯ ಅಂಥೋಣಿ ಜಾರ್ಜ್, ಮುಖ್ಯ ಭದ್ರತಾ ಮತ್ತು ಜಾಗೃತ ಅಧಿಕಾರಿ ಜಿ.ಎನ್. ಲಿಂಗರಾಜು ಅವರು ನಿಗಮದ ಪರವಾಗಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಎಸ್ಆರ್‌ಟಿಸಿಯಲ್ಲಿ ಅನುಷ್ಠಾನಗೊಳಿಸಲಾದ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಮಧ್ಯಪ್ರದೇಶ ನಾಯಕತ್ವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular