HomeKarnatakaBIG NEWS : ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು...

BIG NEWS : ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಅತಿಥಿ ಉಪನ್ಯಾಸಕರ ಪ್ರತಿಭಟನೆ..!

ಬೆಂಗಳೂರು : ದರ್ಶನ್ & ಗ್ಯಾಂಗ್ ಕೊಲೆ ಪ್ರಕರಣ, ವಾಲ್ಮೀಕಿ ಹಗರಣ ಸೇರಿದಂತೆ ವಿವಿಧ ಪ್ರಕರಣಗಳು ರಾಜ್ಯ ಸರ್ಕಾರಕ್ಕೆ ತಲೆನೋವು ತಂದಿದೆ. ಇದರ ನಡುವೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದ್ದು, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಲಿದ್ದಾರೆ.

ವೇತನ ಹೆಚ್ಚಳ, ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯದ ವಿವಿಧ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದ ವಿವಿಧ ಕಾಲೇಜಿನ ಉಪನ್ಯಾಸಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸರ್ಕಾರದ ಗಮನ ಸೆಳೆಯಲಿದ್ದಾರೆ.

ಈಗಾಗಲೇ ತರಗತಿಗಳು ಆರಂಭವಾಗಿದ್ದು, ಉಪನ್ಯಾಸಕರು ಪ್ರತಿಭಟನೆಗೆ ಇಳಿದರೆ ಮಕ್ಕಳಿಗೆ ತೊಂದರೆಯಾಗಲಿದೆ. ಮಕ್ಕಳ ಹಿತದೃಷ್ಟಿ ಹಿನ್ನೆಲೆ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡು ಬೇಗ ಉಪನ್ಯಾಸಕರ ಸಮಸ್ಯೆ ಇತ್ಯರ್ಥಗೊಳಿಸುವಂತೆ ಉಪನ್ಯಾಸಕರು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular