HomeIndiaJOB ALERT : ಉದ್ಯೋಗಾಂಕ್ಷಿಗಳಿಗೆ ಬಂಪರ್ ಸುದ್ದಿ : 'NHAI' ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ...

JOB ALERT : ಉದ್ಯೋಗಾಂಕ್ಷಿಗಳಿಗೆ ಬಂಪರ್ ಸುದ್ದಿ : ‘NHAI’ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಜನರಲ್ ಮ್ಯಾನೇಜರ್ (ಕಾನೂನು), ಡೆಪ್ಯುಟಿ ಜನರಲ್ ಮ್ಯಾನೇಜರ್ (ಲೀಗಲ್), ಮ್ಯಾನೇಜರ್ (ಆಡಳಿತ), ಅಸಿಸ್ಟೆಂಟ್ ಮ್ಯಾನೇಜರ್ (ಆಡಳಿತ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎನ್ಎಚ್ಎಐ nhai.gov.in ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 8 ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ
ಎನ್ಎಚ್ಎಐ ನೇಮಕಾತಿ 2024 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಕೆಳಗೆ ನೀಡಲಾದ ಹುದ್ದೆಗಳಲ್ಲಿ ನೇಮಕಾತಿ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಯಸ್ಸಿನ ಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 56 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.

ಸಂಬಳ

ಜನರಲ್ ಮ್ಯಾನೇಜರ್ (ಲೀಗಲ್) – ರೂ. 123100 ರಿಂದ ರೂ. 215900 ರವರೆಗೆ.

ಡೆಪ್ಯುಟಿ ಜನರಲ್ ಮ್ಯಾನೇಜರ್ (ಲೀಗಲ್) – ರೂ. 78800 ರಿಂದ ರೂ. 209200

ಮ್ಯಾನೇಜರ್ (ಆಡಳಿತ) – 15600 ರಿಂದ 39100 ರೂ.

ಅಸಿಸ್ಟೆಂಟ್ ಮ್ಯಾನೇಜರ್ (ಆಡಳಿತ) – 9300 ರಿಂದ 34800 ರೂ.

ಆಯ್ಕೆ ಪ್ರಕ್ರಿಯೆ

ಎನ್ಎಚ್ಎಐನಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಈ ವಿಳಾಸಕ್ಕೆ ಕಳುಹಿಸಬೇಕು

ಈ ನೇಮಕಾತಿಗೆ ಅರ್ಜಿ ಸಲ್ಲಿಸುವವರು ತಮ್ಮ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಬೇಕು ಮತ್ತು ಸಂಬಂಧಿತ ದಾಖಲೆಗಳೊಂದಿಗೆ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು. ವಿಳಾಸ: ಡಿಜಿಎಂ (ಎಚ್ಆರ್ / ಆಡಳಿತ)-3 ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ಲಾಟ್ ನಂ. ಜಿ 5-&6, ಸೆಕ್ಟರ್-10, ದ್ವಾರಕಾ, ನವದೆಹಲಿ-110075

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular