ಬೆಂಗಳೂರು: ನೂತನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿರುವ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕೇಂದ್ರ ಸಚಿವರಾದ ನಂತರ ನಿನ್ನೆ ರಾಜ್ಯಕ್ಕೆ ಆಗಮಿಸಿದ ಅವರಿಗೆ ಅದ್ದೂರಿ ಸ್ವಾಗತ ನೀಡಲಾಗಿತ್ತು. ಇದೀಗ ನೂತನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ಬೆಳಗ್ಗೆ ಸ್ಪೀಕರ್ ಯಟಿ ಖಾದರ್ ಭೇಟಿಯಾದ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದರು. ರಾಜೀನಾಮೆ ಸಲ್ಲಿಸುವ ವೇಳೆ ಜಿಟಿ ದೇವೇಗೌಡ, ಭೋಜೇಗೌಡ, ಮತ್ತಿತರಿದ್ದರು.