HomeKarnatakaBIG NEWS : ಶಾಸಕ ಸ್ಥಾನಕ್ಕೆ H.D ಕುಮಾರಸ್ವಾಮಿ, ಬೊಮ್ಮಾಯಿ ರಾಜೀನಾಮೆ..!

BIG NEWS : ಶಾಸಕ ಸ್ಥಾನಕ್ಕೆ H.D ಕುಮಾರಸ್ವಾಮಿ, ಬೊಮ್ಮಾಯಿ ರಾಜೀನಾಮೆ..!

ಬೆಂಗಳೂರು : ಶಾಸಕ ಸ್ಥಾನಕ್ಕೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಪ್ರತ್ಯೇಕವಾಗಿ ಸ್ಪೀಕರ್ ಯು.ಟಿ ಖಾದರ್ ಅವರನ್ನು ಭೇಟಿಯಾದ ಇಬ್ಬರು ನಾಯಕರು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಹಾಗೂ ಶಿಗ್ಗಾಂವಿ ಕ್ಷೇತ್ರದ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ನೀಡಿದ್ದಾರೆ. ಹಾವೇರಿ ಲೋಕಸಭೆ ಕ್ಷೇತ್ರದಿಂದ ಸಂಸದನಾಗಿ ಆಯ್ಕೆಯಾದ ಹಿನ್ನೆಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿರುವ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕೇಂದ್ರ ಸಚಿವರಾದ ನಂತರ ನಿನ್ನೆ ರಾಜ್ಯಕ್ಕೆ ಆಗಮಿಸಿದ ಅವರಿಗೆ ಅದ್ದೂರಿ ಸ್ವಾಗತ ನೀಡಲಾಗಿತ್ತು. ಇದೀಗ ನೂತನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular