HomeKarnatakaBREAKING : ರೇಣುಕಾಸ್ವಾಮಿ ಹತ್ಯೆ ಕೇಸ್ : 'SPP' ಯಾಗಿ ಪ್ರಸನ್ನ ಕುಮಾರ್ ನೇಮಿಸಿ ರಾಜ್ಯ...

BREAKING : ರೇಣುಕಾಸ್ವಾಮಿ ಹತ್ಯೆ ಕೇಸ್ : ‘SPP’ ಯಾಗಿ ಪ್ರಸನ್ನ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಪಿಪಿಯಾಗಿ ( ವಿಶೇಷ ಸರ್ಕಾರಿ ಅಭಿಯೋಜಕ) ಪ್ರಸನ್ನ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪರವಾಗಿ ವಾದಿಸಲು ಎಸ್ ಪಿಪಿಯಾಗಿ (ವಿಶೇಷ ಸರ್ಕಾರಿ ಅಭಿಯೋಜಕ) ಪ್ರಸನ್ನ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗದ ರೇಣುಕಾ ಸ್ವಾಮಿ ( ಕೊಲೆಯಾದ ವ್ಯಕ್ತಿ), ಈ ರೇಣುಕಾ ಸ್ವಾಮಿ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ, ಫೋಟೋ ಕಳುಹಿಸಿದ್ದನು ಎನ್ನಲಾಗಿದೆ. ಪವಿತ್ರ ಗೌಡ ಕೂಡ ಈ ವಿಚಾರವನ್ನು ದರ್ಶನ್ ಗಮನಕ್ಕೆ ತಂದಿದ್ದರು . ನಂತರ ಯಾರೋ ಒಬ್ಬರು ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ರಾಘವೇಂದ್ರ ಎಂಬುವವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ. ನಂತರ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಕಾರ್ ಶೆಡ್ ಒಂದರಲ್ಲಿ ಹಲ್ಲೆ ನಡೆಸಲಾಗಿದೆ. ವೇಳೆ ನಟ ದರ್ಶನ್ ಕೂಡ ಸ್ಥಳದಲ್ಲಿದ್ದರು . ಅವರ ಸೂಚನೆ ಮೇರೆಗೆ ರೇಣುಕಾ ಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿಡಿಆರ್, ಟವರ್ ಡಂಪ್, ಮೊಬೈಲ್ ಸೇರಿ ಸಾಕ್ಷ್ಯಗಳ ಕಲೆ ಹಾಕಿರುವ ಪೊಲೀಸರು ಮಾಹಿತಿ ಆಧರಿಸಿ ಕೊಲೆ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಅನೇಕ ಮಾಹಿತಿಗಳನ್ನು ಕಲೆ ಹಾಕಲಾಗಿದ್ದು, ತನಿಖೆ ಚುರುಕುಗೊಂಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular