HomeKarnatakaBIG NEWS: ಕಿವಿಮೇಲೆ ದಾಸವಾಳ ಹೂವಿಟ್ಟುಕೊಂಡು ಸರ್ಕಾರದ ವಿರುದ್ಧ ಸಿ.ಟಿ.ರವಿ ನೇತೃತ್ವದಲ್ಲಿ ವಿನೂತನ ಪ್ರತಿಭಟನೆ

BIG NEWS: ಕಿವಿಮೇಲೆ ದಾಸವಾಳ ಹೂವಿಟ್ಟುಕೊಂಡು ಸರ್ಕಾರದ ವಿರುದ್ಧ ಸಿ.ಟಿ.ರವಿ ನೇತೃತ್ವದಲ್ಲಿ ವಿನೂತನ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ತೈಲ ಬೆಲೆ ಹೆಚ್ಚಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಎಂಎಲ್ ಸಿ ಸಿ.ಟಿ.ರವಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಚಿಕ್ಕಮಗಳೂರು ನಗರದಲ್ಲಿ ಎಂಎಲ್ ಸಿ ಸಿ.ಟಿ.ರವಿ ಹಾಗೂ ಬಿಜೆಪಿ ಕಾರ್ಯಕರ್ತರು ಕಿವಿ ಮೇಲೆ ದಾಸವಾಳ ಹೂವಿಟ್ಟುಕೊಂಡು, ಒಂದು ಕೈಯಲ್ಲಿ ಹೂವು, ಇನ್ನೊಂದು ಕೈಯಲ್ಲಿ ಚಿಪ್ಪು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಪೆಟ್ರೋಲ್, ಡೀಸೆಲ್ ದರ ಏರಿಸುವ ಮೂಲಕ ರಾಜ್ಯ ಸರ್ಕಾರ ಜನರ ಕೈಗೆ ಚಿಪ್ಪುಕೊಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಅಲ್ಲದೇ ವಾಹನ ಸವಾರರ ಕೈಗೆ ದಾಸವಾಳ ಹೂವು, ಚಿಪ್ಪು ಕೊಟ್ಟು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸಿ.ಟಿ.ರವಿ, ಸರ್ಕಾರ ಗ್ಯಾರಂಟಿ ಗ್ಯಾರಂಟಿ ಎನ್ನುತ್ತಾ ತೈಲ ಬೆಲೆ ಏರಿಸಿ, ಜನರ ಕಿವಿಗೆ ಹೂವಿಟ್ಟು ಕೈಗೆ ಗ್ಯಾರಂಟಿ ಚಿಪ್ಪುಕೊಟ್ಟಿದೆ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular