ಹುಬ್ಬಳ್ಳಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದರ್ಶನ್ ವಿರುದ್ಧ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೆಲ್ಲದ್, ಅವನು ಮನುಷ್ಯ ಇದಾನೊ ರಾಕ್ಷಸ ಇದಾನೋ? ಆತ ಈರೀತಿ ಇದ್ದಾನೆಂದು ಗೊತ್ತೆ ಇರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದರ್ಶನ್ ಈ ರೀತಿಯ ವ್ಯಕ್ತಿ ಎಂದು ಗೊತ್ತಿರಲಿಲ್ಲ. ಹಾಗಾಗಿ ಅವನನ್ನು ಕೃಷಿ ಇಲಾಖೆ ರಾಯಭಾರಿಯನ್ನಾಗಿ ಮಾಡಲಾಗಿತ್ತು. ಸರ್ಕಾರ ಮಾಡುತ್ತಿರುವ ತಪ್ಪುಗಳು ಒಂದೆರಡಲ್ಲ. ಸಮಾಜ ವಿರೋಧಿ ಕೆಲಸ ಮಾಡುತ್ತಿರುವವರಿಗೆ ರಾಜಾತಿಥ್ಯ…. ಅಂಥವರಿಗೆ ರಾಜಾತಿಥ್ಯ ಕೊಡ್ತೇವೆ ಎಂದರೆ ಏನ್ ಹೇಳ್ಬೇಕು? ಕ್ರಿಮಿನಲ್ ಕ್ರಿಮಿನಲ್ ಗಳೇ ಎಂದು ಕಿಡಿಕಾರಿದ್ದಾರೆ.
ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ಆರೋಪದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದ ದರ್ಶನ್ ಹಾಗೂ ಗ್ಯಾಂಗ್ ಬೆಂಗಳೂರಿನ ಆರ್.ಆರ್.ನಗರದ ಪಟ್ಟಣಗೆರೆ ಶೆಡ್ ನಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ ಬರ್ಬರವಾಗಿ ಹತ್ಯೆ ಮಾಡಿತ್ತು. ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.