HomeKarnatakaಬಕ್ರಿದ್ ಹಬ್ಬ ಹಿನ್ನಲೆ ಇಂದು ಮಧ್ಯರಾತ್ರಿಯಿಂದ ಜೂ. 18 ರ ಬೆಳಗ್ಗೆ 6 ಗಂಟೆವರೆಗೆ ಮದ್ಯ...

ಬಕ್ರಿದ್ ಹಬ್ಬ ಹಿನ್ನಲೆ ಇಂದು ಮಧ್ಯರಾತ್ರಿಯಿಂದ ಜೂ. 18 ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ನಿಷೇಧ

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16ರ ಮಧ್ಯರಾತ್ರಿ 11:59 ಗಂಟೆಯಿಂದ ಜೂನ್ 18, 2024 ರ ಬೆಳಗಿನ 6 ಗಂಟೆಯವರೆಗೆ ಧಾರವಾಡ ಜಿಲ್ಲೆಯಾದ್ಯಂತ(ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತು ಪಡಿಸಿ) ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದ್ದಾರೆ.

ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬೀರ್ ಬಾರ್ ಗಳು, ಕ್ಲಬ್ ಗಳು ಮತ್ತು ಮದ್ಯದ ಡಿಪೋಗಳನ್ನು ಈ ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಮುಚ್ಚಿಸತಕ್ಕದ್ದು. ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ವಲಯ ಅಬಕಾರಿ ಇನ್ಸ್ಪೆಕ್ಟರ್ ಹಾಗೂ ಉಪವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ, 1965ರ ಕಲಂ 21(2)ರನ್ವಯ ಅವಶ್ಯಕತೆ ಕಂಡುಬಂದಲ್ಲಿ, ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆದೇಶ ನೀಡಿದ್ದಾರೆ.

ಧಾರವಾಡ ಅಬಕಾರಿ ಉಪ ಆಯುಕ್ತರು ಮತ್ತು ಆರಕ್ಷಕ ಅಧೀಕ್ಷಕರು ಹಾಗೂ ಹೆಚ್ಚುವರಿ ಆರಕ್ಷಕ ಅಧೀಕ್ಷಕರ ವ್ಯಾಪ್ತಿಯಲ್ಲಿ ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಣಿಕೆಯ ನಿಷೇಧ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular