HomeAutoBIG NEWS: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

BIG NEWS: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಇಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ.

ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ ಪ್ರತಿಭಟನೆ ಕೈಗೊಂಡಿದೆ.

ಲೋಕಸಭೆ ಚುನಾವಣೆ ಬೆನ್ನಲೇ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ತೆರಿಗೆ ಹೆಚ್ಚಿಸಿದ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಕೂಡಲೇ ತೈಲ ದರ ಇಳಿಕೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆಲೆ ಏರಿಕೆ ಮತ್ತು ತೆರಿಗೆ ಹೆಚ್ಚಳವನ್ನು ರಾಜ್ಯದ ಜನರಿಗೆ ಕೊಡುಗೆಯಾಗಿ ನೀಡಿದೆ. ಆಸ್ತಿ ತೆರಿಗೆ ಹೆಚ್ಚಳ, ಕುಡಿಯುವ ನೀರಿನ ದರ ಏರಿಕೆ, ವಿದ್ಯುತ್ ದರ ಏರಿಕೆ, ವಾಹನಗಳ ತೆರಿಗೆ, ಆಸ್ತಿ ತೆರಿಗೆ ಹೆಚ್ಚಳ ಮಾಡಲಾಗಿದೆ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ದೂರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular