HomeIndiaತಿರುಪತಿಯಲ್ಲಿ ಭಕ್ತ ಸಾಗರ: ದರ್ಶನಕ್ಕೆ ಮೂರು ಕಿ.ಮೀ. ಸರತಿ ಸಾಲು

ತಿರುಪತಿಯಲ್ಲಿ ಭಕ್ತ ಸಾಗರ: ದರ್ಶನಕ್ಕೆ ಮೂರು ಕಿ.ಮೀ. ಸರತಿ ಸಾಲು

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ.

ಶನಿವಾರ, ಭಾನುವಾರದ ರಜೆ, ಸೋಮವಾರ ಬಕ್ರಿದ್ ಹಬ್ಬದ ಕಾರಣ ತಿರುಮಲದ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತರ ಸಂಖ್ಯೆ ಭಾರಿ ಹೆಚ್ಚಾಗಿದೆ. ಶನಿವಾರ, ಭಾನುವಾರ ಹೆಚ್ಚಿನ ಜನದಟ್ಟಣೆ ಕಂಡುಬಂದಿದ್ದು, ದೇವರ ದರ್ಶನಕ್ಕೆ ಭಕ್ತರು ಸುಮಾರು ಮೂರು ಕಿಲೋ ಮೀಟರ್ ವರೆಗೂ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡು ಬಂದಿದೆ.

ಚುನಾವಣೆ ಮುಕ್ತಾಯವಾಗಿದ್ದು, ಅನೇಕ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದೆ. ವಾರಾಂತ್ಯ ರಜೆ ಮತ್ತು ಬಕ್ರಿದ್ ಹಬ್ಬದ ರಜೆ ಇರುವುದರಿಂದ ಭಾರಿ ಸಂಖ್ಯೆಯ ಭಕ್ತರು ತಿರುಮಲಕ್ಕೆ ಆಗಮಿಸಿದ್ದಾರೆ. ಸೋಮವಾರವೂ ಹೆ್ಇನ ಜನಸಂದಣಿ ಕಂಡುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular