HomeKarnatakaBIG NEWS: ವೇತನ ಹೆಚ್ಚಳಕ್ಕೆ ಸರ್ಕಾರಿ ನೌಕರರ ಗಡುವು: ಹೋರಾಟದ ಎಚ್ಚರಿಕೆ

BIG NEWS: ವೇತನ ಹೆಚ್ಚಳಕ್ಕೆ ಸರ್ಕಾರಿ ನೌಕರರ ಗಡುವು: ಹೋರಾಟದ ಎಚ್ಚರಿಕೆ

ರಾಯಚೂರು: 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸರ್ಕಾರ ಇನ್ನೂ ವಿಳಂಬ ಮಾಡಿದಲ್ಲಿ ಹೋರಾಟ ನಡೆಸಲಾಗುವುದು ಎಂದು ಸರ್ಕಾರಿ ನೌಕರರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ಸಂಬಂಧ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇತ್ತು. ಆದರೆ, ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದರಿಂದಾಗಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರು ಅಸಮಾಧಾನಗೊಂಡಿದ್ದಾರೆ.

ಈ ಕುರಿತಾಗಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ವೇತನ ಆಯೋಗದ ಶಿಫಾರಸು ಯಥಾವತ್ತಾಗಿ ಜಾರಿಗೆ ತರಲು ಜೂನ್ ಅಂತ್ಯದವರೆಗೆ ಕಾಯುತ್ತೇವೆ. ಸರ್ಕಾರ ನಿರ್ಲಕ್ಷ್ಯ ತೋರಿದರೆ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವೇತನ ಹೆಚ್ಚಳ ಬಗ್ಗೆ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲು ಕಾಲಾವಕಾಶ ನೀಡುತ್ತೇವೆ. ಇನ್ನೂ ವಿಳಂಬ ಮಾಡಿದಲ್ಲಿ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular