HomeKarnatakaBREAKING : ನಟ 'ದರ್ಶನ್' ಬಂಧನದ ಹಿನ್ನೆಲೆ ಮನನೊಂದು 'ಅಭಿಮಾನಿ' ಆತ್ಮಹತ್ಯೆ .!

BREAKING : ನಟ ‘ದರ್ಶನ್’ ಬಂಧನದ ಹಿನ್ನೆಲೆ ಮನನೊಂದು ‘ಅಭಿಮಾನಿ’ ಆತ್ಮಹತ್ಯೆ .!

ಚನ್ನಪಟ್ಟಣ : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ಹಿನ್ನೆಲೆ ಮನನೊಂದು ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಮಾಳೆ ಗ್ರಾಮದಲ್ಲಿ ನಡೆದಿದೆ.

ದರ್ಶನ್ ಅಭಿಮಾನಿ ಭೈರೇಶ್ ಎಂಬಾತ ಮೋರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು, ದರ್ಶನ್ ಬಂಧನದ ಹಿನ್ನೆಲೆ ಖಿನ್ನತೆಗೆ ಒಳಗಾಗಿದ್ದ ಭೈರೇಶ್ ಮೋರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಸಹಚರರನ್ನು ಕಳೆದ ವಾರ ಬಂಧಿಸಲಾಗಿತ್ತು. ಈ ಘಟನೆ ನಡೆದ ಬಳಿಕ ದರ್ಶನ್ ಅಭಿಮಾನಿ ಭೈರೇಶ್ ಅನ್ನ ನೀರು ಬಿಟ್ಟು ಖಿನ್ನತೆಗೆ ಒಳಗಾಗಿದ್ದನು ಎನ್ನಲಾಗಿದೆ. ನಂತರ ಮೋರಿಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ಶೀಘ್ರದಲ್ಲೇ ಅಪ್ ಡೇಟ್ ಆಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular