ಬೆಂಗಳೂರು : ಕೆ. ಆರ್ ನಗರದ ಮಹಿಳೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಇಂದು ಎಸ್ ಐ ಟಿ ವಿಚಾರಣೆಗೆ ಹಾಜರಾಗಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಜ್ವಲ್ ರೇವಣ್ಣ ಎಸ್ ಐ ಟಿ ವಶದಲ್ಲಿದ್ದು, ಇದೀಗ ತಂದೆ ಹೆಚ್.ಡಿ ರೇವಣ್ಣ ಕೂಡ ಇಂದು ಎಸ್ ಐ ಟಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ ಇತ್ತೀಚೆಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿತ್ತು.ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಜಾಮೀನು ನೀಡಿದೆ.
.