HomeKarnatakaBIG NEWS: ಸಿಐಡಿ ಕಚೇರಿಯಲ್ಲಿ ಒಂದೇ ಬಾರಿ ವಿಚಾರಣೆಗೆ ಹಾಜರಾದ ಮೂವರು ರಾಜಕೀಯ ನಾಯಕರು

BIG NEWS: ಸಿಐಡಿ ಕಚೇರಿಯಲ್ಲಿ ಒಂದೇ ಬಾರಿ ವಿಚಾರಣೆಗೆ ಹಾಜರಾದ ಮೂವರು ರಾಜಕೀಯ ನಾಯಕರು

ಬೆಂಗಳೂರು: ರಾಜ್ಯದ ಘಟಾನುಘಟಿ ರಾಜಕೀಯ ನಾಯಕರು ಇಂದು ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಒಂದೇ ಬಾರಿಗೆ ವಿಚಾರಣೆಗೆ ಹಾಜರಾಗಿರುವ ಘಟನೆ ನಡೆದಿದೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಇದೇ ವೇಳೆ ಮೈಸೂರಿನ ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಕೂಡ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ.

ಇದೇ ಸಂದರ್ಭದಲ್ಲಿ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನೂ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರುಪಡಿಸಲಾಗಿದೆ. ಈ ಮೂಲಕ ಮಾಜಿ ಸಿಎಂ, ಮಾಜಿ ಸಚಿವ, ಮಾಜಿ ಸಂಸದ ಮೂವರು ಒಂದೇ ಬಾರಿಗೆ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular