HomeKarnatakaಟಕಾಟಕ್ ಎಂದು ಹಣ ಅಲ್ಲ, ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ; ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ; ಆರ್.ಅಶೋಕ್...

ಟಕಾಟಕ್ ಎಂದು ಹಣ ಅಲ್ಲ, ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ; ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕರೆ ನೀಡಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಆರ್.ಅಶೋಕ್, ಸಿಎಂ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ಪೆಟ್ರೋಲ್ ಡೀಸೆಲ್ ದರವನ್ನೂ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯನವರಿಗೆ ಎರಡು ನಾಲಿಗೆ ಇದೆ. ಬಿಜೆಪಿ ಸರ್ಕಾರ ಪೆಟ್ರೋಲ್‌ ದರ ಏರಿಸಿದ್ದಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನೆ ಮಾಡಿದ್ದರು. ಈಗ ಪೆಟ್ರೋಲ್ ಗೆ ಮೂರು ರೂಪಾಯಿ ಹೆಚ್ಚು ಮಾಡಿದ ಕಾಂಗ್ರೆಸ್‌ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ತೈಲ ಬೆಲೆ ಏರಿಯಾದರೆ ಸಿಮೆಂಟ್‌, ತರಕಾರಿ ಎಲ್ಲ ಬೆಲೆಯೂ ಏರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಯಾವ ಬೆಲೆಗಳು ಹೆಚ್ಚಲಿದೆ ಎಂದು ತಿಳಿಸಲಿ. ಗ್ಯಾರಂಟಿ ಯೋಜನೆಗಳೆಂದು ಹೇಳಿ ಎಲ್ಲರಿಗೂ ಒಂದು ಲಕ್ಷ, ಎರಡು ಸಾವಿರ ಕೋಡುತ್ತೇವೆ ಎಂದರು. ರಾಹುಲ್‌ ಗಾಂಧಿ ಇನ್ನೂ ಮುಂದೆ ಹೋಗಿ ಟಕಾಟಕ್‌ ಎಂದು ಖಾತೆಗೆ ಹಣ ಹಾಕುತ್ತೇನೆ ಎಂದರು. ಆದರೆ ಇಲ್ಲಿ ಟಕಾಟಕ್‌ ಎಂದು ಜೇಬಿಗೆ ಕತ್ತರಿ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular