HomeIndiaBIG BREAKING: ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಘೋಷಣೆ

BIG BREAKING: ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಘೋಷಣೆ

ನವದೆಹಲಿ: ವಾರಗಳ ಸಸ್ಪೆನ್ಸ್‌ ಗೆ ಅಂತ್ಯ ಹಾಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಾವು ಪ್ರತಿನಿಧಿಸುವ ಲೋಕಸಭೆ ಸ್ಥಾನವನ್ನು ಸೋಮವಾರ ಅಂತಿಮವಾಗಿ ನಿರ್ಧರಿಸಿದ್ದಾರೆ.

2024 ರ ಲೋಕಸಭಾ ಚುನಾವಣೆಯಲ್ಲಿ, ರಾಹುಲ್ ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಕ್ಷೇತ್ರದಿಂದ ಗೆದ್ದಿದ್ದರು. ಅವರು 18ನೇ ಲೋಕಸಭೆಯಲ್ಲಿ ಯಾವ ಸ್ಥಾನವನ್ನು ಪ್ರತಿನಿಧಿಸಲು ಆಯ್ಕೆ ಮಾಡುತ್ತಾರೆ ಎಂಬ ಊಹಾಪೋಹಗಳು ಹಬ್ಬಿದ್ದವು.

ಸೋಮವಾರ ನಡೆದ ಪಕ್ಷದ ಉನ್ನತ ಮಟ್ಟದ ಸಭೆಯ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ರಾಯ್ ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ ಮತ್ತು ಪ್ರಿಯಾಂಕಾ ಗಾಂಧಿ ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಹುಲ್ ಗಾಂಧಿ ಅವರು ಎರಡು ಲೋಕಸಭಾ ಸ್ಥಾನಗಳಿಂದ ಚುನಾಯಿತರಾಗಿದ್ದಾರೆ. ನಿಯಮಗಳ ಪ್ರಕಾರ, ಅವರು ಒಂದು ಸ್ಥಾನವನ್ನು ತೆರವು ಮಾಡಬೇಕು ಮತ್ತು ಒಂದು ಸ್ಥಾನದಲ್ಲಿ ಮುಂದುವರೆಯಬೇಕು. ಜೂನ್ 18 ಕೊನೆಯ ದಿನಾಂಕವಾಗಿರುವುದರಿಂದ ರಾಹುಲ್ ಅವರ ರಾಯ್ ಬರೇಲಿ ಸ್ಥಾನವನ್ನು ಉಳಿಸಿಕೊಳ್ಳಲು ನಾವು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ರಾಹುಲ್ ಅವರು ವಯನಾಡ್‌ ಜನರಿಂದ ಪ್ರೀತಿಯನ್ನು ಪಡೆದಿದ್ದಾರೆ. ಮತ್ತು ಅವರು ಸ್ಥಾನವನ್ನು ಉಳಿಸಿಕೊಳ್ಳಲು ಬಯಸುತ್ತಾರೆ. ಸಾಕಷ್ಟು ಚರ್ಚೆಯ ನಂತರ ನಾವು ಪ್ರಿಯಾಂಕಾ ಗಾಂಧಿ ವಯನಾಡ್‌ನಿಂದ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದು, ಅದಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular