HomeKarnatakaBREAKING: ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ

BREAKING: ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ.

ಜಾಜಿ(45) ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಪತಿ ಹರೀಶ್(50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿದಿನ ಒಂದಲ್ಲ ಒಂದು ಕಾರಣಕ್ಕೆ ದಂಪತಿ ಜಗಳವಾಡುತ್ತಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ದಂಪತಿ ನಡುವೆ ಗಲಾಟೆ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ನಾಡ ಬಂದೂಕಿನಿಂದ ಗುಂಡು ಹಾರಿಸಿ ಪತ್ನಿ ಕೊಲೆ ಮಾಡಿದ ನಂತರ ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular