HomeKarnatakaಇಂದು ಒಂದೇ ದಿನ ದಾಖಲೆಯ 600 ಪ್ರಕರಣಗಳ ವಿಚಾರಣೆ ನಡೆಸಲಿರುವ ನ್ಯಾ. ಎಂ. ನಾಗಪ್ರಸನ್ನ

ಇಂದು ಒಂದೇ ದಿನ ದಾಖಲೆಯ 600 ಪ್ರಕರಣಗಳ ವಿಚಾರಣೆ ನಡೆಸಲಿರುವ ನ್ಯಾ. ಎಂ. ನಾಗಪ್ರಸನ್ನ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಿಂದ ಜೂನ್ 18ರ ಮಂಗಳವಾರದಂದು ದಾಖಲೆಯ 600 ಅರ್ಜಿಗಳ ವಿಚಾರಣೆ ನಡೆಸಲಾಗುವುದು

ಕೋರ್ಟ್ ಹಾಲ್ 19ರ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಸಿಆರ್ಪಿಸಿ ಕಲಂ 482ರ ಅಡಿಯಲ್ಲಿ ನ್ಯಾಯಾಲಯ ಪ್ರಕ್ರಿಯೆಯ ದುರುಪಯೋಗ ತಡೆಗಟ್ಟಲು ಅಥವಾ ಭದ್ರತೆಯ ಅಗತ್ಯವಿರುವ ಕ್ರಿಮಿನಲ್ ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.

ಕೋರ್ಟ್ ಹಾಲ್ 19ರ ಜೂನ್ 18ರ ಕಾಸ್ ಲಿಸ್ಟ್ 53 ಪುಟಗಳಷ್ಟಿದ್ದು, ಇವುಗಳಲ್ಲಿ 257 ಹೊಸ ಅರ್ಜಿಗಳು ಇವೆ. ಇತ್ತೀಚಿನ ದಿನಗಳಲ್ಲಿ ಅಧಿಕ ಪ್ರಕರಣಗಳ ವಿಚಾರಣೆ ನಡೆಸಿ ಸ್ವಂತ ವಿಲೇವಾರಿ ಮಾಡುವ ಮೂಲಕ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಇವತ್ತು ಒಂದೇ ದಿನ ದಾಖಲೆಯ 600 ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular