ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ.
ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಇಂದು ಪ್ರಕಟಿಸಿದೆ. ಭವಾನಿಯವರ ಅರ್ಜಿ ಸಂಬಂಧ ಜೂನ್ 14ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಲಾಗಿದ್ದು, ಇಂದು ಬೆಳಗ್ಗೆ ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಭವಾನಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿತ್ತು.