ಕುವೈತ್ ನಲ್ಲಿ ಅಗ್ನಿ ದುರಂತ: ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಕೆಲ ದಿನಗಳ ಹಿಂದೆ ಕುವೈತ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ ವಿಜಯ ಕುಮಾರ್ ಬಿನ್ ಕೊಬ್ಬಣ್ಣ ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರವನ್ನು ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಜಯ್ ಕುಮಾರ್ ಕಳೆದ ಎಂಟು ವರ್ಷಗಳಿಂದ ವಾಹನ ಚಾಲಕರಾಗಿ ಕುವೈತ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನಿವಾಸಿ ಭಾರತೀಯ. ವಿಜಯ ಕುಮಾರ್ ಅವರ ಕುಟುಂಬದಲ್ಲಿ ಅವರ ಅಣ್ಣ ತಮ್ಮಂದಿರು ಸೇರಿದಂತೆ 8 ಜನ ಅವಲಂಬಿತರಿದ್ದಾರೆ. ಇವರ ಜೀವನ ನಿರ್ವಹಣೆ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೇರಳ ಸರ್ಕಾರ ಅಗ್ನಿ ದರುಂತದಲ್ಲಿ ಮೃತಪಟ್ಟ ಕುಟಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿತ್ತು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವೂ ಆರ್ಥಿಕ ನೆರವು ಘೋಷಿಸಬೇಕೆಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ: ಆರತಿ ಕೃಷ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಮೃತ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ಒದಗಿಸಲು ಸೂಚಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read