HomeAutoಗಮನಿಸಿ: ಎಲ್ಲಾ ವಾಹನಗಳಿಗೆ ಸಿಎಂವಿ ಮಾನದಂಡದಂತೆ LED ಹೆಡ್ ಲೈಟ್ ಕಡ್ಡಾಯ: ಪ್ರಖರ ಬೆಳಕು ಸೂಸುವ,...

ಗಮನಿಸಿ: ಎಲ್ಲಾ ವಾಹನಗಳಿಗೆ ಸಿಎಂವಿ ಮಾನದಂಡದಂತೆ LED ಹೆಡ್ ಲೈಟ್ ಕಡ್ಡಾಯ: ಪ್ರಖರ ಬೆಳಕು ಸೂಸುವ, ಕಣ್ಣು ಕುಕ್ಕುವ ಲೈಟ್ ಅಳವಡಿಸಿದ್ರೆ ಕೇಸ್ ದಾಖಲು

ಬೆಂಗಳೂರು: ಎಲ್ಲಾ ವಾಹನಗಳಿಗೆ ಸಿಎಂವಿ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸುವಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಲೋಕ್ ಕುಮಾರ್ ಸೂಚಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು. ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವು ತೊಂದರೆಯುಂಟಾಗುತ್ತಿದೆ. ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ.

ಈ ಪೈಕಿ ಪ್ರಮುಖವಾಗಿ ಭಾರಿ ಗಾತ್ರ ವಾಹನಗಳಾದ ಲಾರಿ, ಟ್ರಕ್. ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ(dazzling and glaring) ಎಲ್ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೊಂದರೆಯಾಗುತ್ತಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲಾ ವಾಹನ ಸವಾರರು ತಮ್ಮ ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಅಳವಡಿಸಬೇಕಾಗಿರುವ ಹೆಡ್‌ ಲೈಟ್‌ ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲಿಸಬಹುದಾಗಿರುತ್ತದೆ ಎಂದು ತಿಳಿಸಿದ್ದಾರೆ.

ಆದ್ದರಿಂದ, ಘಟಕಾಧಿಕಾರಿಗಳು ತಮ್ಮ ತಮ್ಮ ಘಟಕಗಳಲ್ಲಿ ಸಂಚರಿಸುವ ವಾಹನಗಳಲ್ಲಿ ಈ ರೀತಿಯ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವುದು ಕಂಡು ಬಂದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.

ಈ ರೀತಿ ವಾಹನಗಳಲ್ಲಿ ಹೆಚ್ಚು, ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈ ಮಾಹೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಪ್ರಕರಣಗಳನ್ನು ದಾಖಲಿಸಿ, ಕೈಗೊಂಡ ಕ್ರಮ ಬಗ್ಗೆ, ಪಾಲನಾ ವರದಿಯನ್ನು ಜುಲೈ 31ರೊಳಗಾಗಿ ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular