alex Certify ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ರಾಜ್ಯದ ಎಲ್ಲಾ ಶಾಲೆಗಳಲ್ಲಿ 3ನೇ ಶನಿವಾರ ಬ್ಯಾಗ್ ರಹಿತ ದಿನ ‘ಸಂಭ್ರಮ ಶನಿವಾರ’ ಆಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ರಾಜ್ಯದ ಎಲ್ಲಾ ಶಾಲೆಗಳಲ್ಲಿ 3ನೇ ಶನಿವಾರ ಬ್ಯಾಗ್ ರಹಿತ ದಿನ ‘ಸಂಭ್ರಮ ಶನಿವಾರ’ ಆಚರಣೆ

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಲು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಪ್ರತಿ ತಿಂಗಳು ಒಂದು ಶನಿವಾರ ಬ್ಯಾಗ್ ರಹಿತ ದಿನ ಆಚರಿಸಲು ರಾಜ್ಯ ಶಿಕ್ಷಣ ಮತ್ತು ತರಬೇತಿ ಇಲಾಖೆ ನಿರ್ದೇಶನ ನೀಡಿದೆ.

ರಾಜ್ಯದ ಉರ್ದು ಶಾಲೆಗಳಲ್ಲಿ ಶನಿವಾರ ಪೂರ್ಣ ದಿನ ತರಗತಿಗಳು ನಡೆಯುವುದರಿಂದ ಅರ್ಧ ದಿನ ಮಾತ್ರ ತರಗತಿ ನಡೆಯುವ ಪ್ರತಿ ತಿಂಗಳ ಮೂರನೇ ಶುಕ್ರವಾರ ಬ್ಯಾಗ್ ರಹಿತ ದಿನವನ್ನಾಗಿ ಆಚರಿಸಲು ತಿಳಿಸಲಾಗಿದೆ.

ಪ್ರತಿ ತಿಂಗಳ ಮೂರನೇ ಶನಿವಾರ ಬ್ಯಾಗ್ ರಹಿತ ದಿನವನ್ನು ‘ಸಂಭ್ರಮ ಶನಿವಾರ’ ಎಂದು ಅನುಷ್ಠಾನಗೊಳಿಸಬೇಕು. ಈ ದಿನದಂದು ವಿದ್ಯಾರ್ಥಿ ಚಟುವಟಿಕೆ ಹಾಗೂ ಶಿಕ್ಷಕರ ಕೈಪಿಡಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿಎಸ್ಇಆರ್‌ಟಿ) ವೆಬ್ಸೈಟ್ ನಲ್ಲಿ(dsert.karnataka.gov.in) ಅಪ್ಲೋಡ್ ಮಾಡಲಾಗಿದೆ.

ಮಾದಕ ವಸ್ತುಗಳ ವಿರುದ್ಧ ಜಾಗೃತಿ, ಮಾಧ್ಯಮ ಮತ್ತು ಅಂತರ್ಜಾಲ ಬಳಕೆ, ಸ್ವಾಸ್ಥ್ಯ ಮತ್ತು ಶುಚಿತ್ವ, ಪೌಷ್ಟಿಕತೆ, ಸಾರ್ವಜನಿಕ ನೈರ್ಮಲ್ಯ, ಘನತಾಜ್ಯ ನಿರ್ವಹಣೆ, ಆರೋಗ್ಯ ಜೀವನ ಶೈಲಿ, ಸಾರ್ವಜನಿಕ ಸೌಕರ್ಯಗಳು ಮತ್ತು ನನ್ನ ಜವಾಬ್ದಾರಿ, ರಸ್ತೆ ಸುರಕ್ಷತೆ, ಹಿಂಸೆ, ಅಪರಾಧ, ಅಪಘಾತಗಳ ಸಂದರ್ಭಗಳಲ್ಲಿ ರಕ್ಷಣೆ ಹಾಗೂ ಭದ್ರತೆ, ಲಿಂಗ ಸಮಾನತೆಗೆ ಪ್ರೋತ್ಸಾಹ ನೀಡುವುದು ಇಂತಹ ಚಟುವಟಿಕೆಗಳ ಬಗ್ಗೆ ಪ್ರತಿ ತಿಂಗಳ ಮೂರನೇ ಶನಿವಾರ ಶಾಲೆಗಳಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ತಿಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...