ಬೆಂಗಳೂರು : 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಪಿಜಿ-ಸಿಇಟಿ) ಅರ್ಜಿ ಸಲ್ಲಿಸಲು ಅವಧಿಯನ್ನು ಜೂನ್ 20ರ ವರೆಗೆ ವಿಸ್ತರಿಸಲಾಗಿದ್ದು, ನಾಳೆ ಕೊನೆಯ ದಿನಾಂಕವಾಗಿದೆ.
ಜೂನ್ 17ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡ ಕಾರಣ ಮೂರು ದಿನ ಹೆಚ್ಚುವರಿ ಅವಧಿ ನೀಡಲಾಗಿದೆ. ಜೂನ್ 20ರೊಳಗೆ ಶುಲ್ಕ ಪಾವತಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.