alex Certify Renukaswamy Murder Case : ಎಸ್.ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಬಂದೇ ಇಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Renukaswamy Murder Case : ಎಸ್.ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಬಂದೇ ಇಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್.ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಬಂದೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಅವೆಲ್ಲವನ್ನೂ ನಾನು ಕೇಳುವುದೂ ಇಲ್ಲ. ಈ ನೆಲದ ಕಾನೂನು ಏನು ಹೇಳುತ್ತದೆಯೋ ಅದರಂತೆ ತನಿಖೆಯಾಗುತ್ತದೆ. ಇದರಲ್ಲಿ ಒತ್ತಡವೋ ಇನ್ನೊಂದೋ ಈ ಯಾವುದಕ್ಕೂ ನಾನು ಗಮನ ಕೊಡುವವನಲ್ಲ. ‘ಎಂದರು.

ಪೊಲೀಸರಿಗೆ ಪ್ರಕರಣದ ತನಿಖೆಯಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಸ್.ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಈ ವರೆಗೂ ಬಂದೇ ಇಲ್ಲ. ಇದಕ್ಕೆ ಸಂಬಂಧಪಟ್ಟಂತೆ ಈಗ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ಕಲ್ಪಿತ ವರದಿಗಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...