HomeEntertainment'ಸಂಭವಾಮಿ ಯುಗೇ ಯುಗೇ' ಚಿತ್ರದ ಲಿರಿಕಲ್ ಹಾಡು ರಿಲೀಸ್

‘ಸಂಭವಾಮಿ ಯುಗೇ ಯುಗೇ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಜೈ ಶೆಟ್ಟಿ ಅಭಿನಯದ ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ‘ಸಂಭವಾಮಿ ಯುಗೇ ಯುಗೇ’ ಚಿತ್ರದ ‘ಗಾಯವಾದ ಹೃದಯ’ ಎಂಬ ಲಿರಿಕಲ್ ಹಾಡನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿಯಾಗಿದ್ದು, ಪುರಾಣ್ ಶೆಟ್ಟಿಗಾರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಮಹೇಶ್ ರಾಮ ಅವರ ಸಾಹಿತ್ಯವಿದೆ.

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಶ್ರೀಮತಿ ಪ್ರತಿಭಾ ಪಾಟೀಲ್  ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಜೈ ಶೆಟ್ಟಿ, ಸೇರಿದಂತೆ ಪ್ರಮೋದ್ ಶೆಟ್ಟಿ, ಸುಧಾ ರಾಣಿ, ಭವ್ಯ, ಅಶೋಕ್ ಕುಮಾರ್ , ನಿಶಾ ರಜಪೂತ್ , ಮಧುರಾ ಗೌಡ, ಅಭಯ್ ಪುನಿತ್ ಬಣ್ಣ ಹಚ್ಚಿದ್ದಾರೆ. ರವೀಶ್ ಆತ್ಮರಾಮ್ ಸಂಕಲನ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ನರಸಿಂಹ ಸಿ ಸಾಹಸ ನಿರ್ದೇಶನವಿದೆ.

For Latest News Updates, Join Our Whatsapp Community🚩
RELATED ARTICLES

Most Popular