ನೋಯ್ಡಾದ ಸೆಕ್ಟರ್ 125 ರ ಎಕ್ಸ್ ಪ್ರೆಸ್‌ವೇಯಲ್ಲಿ ಕಾರ್ ಮೇಲೆ ಕೂತು ಅಪಾಯಕಾರಿ ಸ್ಟಂಟ್ ಮಾಡುತ್ತಿದ್ದ ಯುವನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಟಿಂಟೆಡ್ ಗ್ಲಾಸ್ ಹೊಂದಿರುವ ಟೊಯೊಟಾ ಫಾರ್ಚುನರ್‌ನ ಮೇಲೆ ಯುವಕನೊಬ್ಬ ಅಪಾಯಕಾರಿ ಸಾಹಸ ಪ್ರದರ್ಶಿಸುತ್ತಿದ್ದ ವೀಡಿಯೊ ವೈರಲ್ ಆಗ್ತಿದ್ದಂತೆ ಪೊಲೀಸರಿಂದ ತ್ವರಿತ ಕ್ರಮ ತೆಗೆದುಕೊಂಡಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ ಯುವಕ ಕಾರಿನ ಛಾವಣಿಯ ಮೇಲೆ ಕುಳಿತು ಸಾಹಸ ಪ್ರದರ್ಶಿಸಿದ್ದಾನೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಕಮಿಷನರೇಟ್ ಮತ್ತು ಟ್ರಾಫಿಕ್ ಪೊಲೀಸರನ್ನು ಟ್ಯಾಗ್ ಮಾಡಿ, ಕ್ರಮಕ್ಕೆ ಒತ್ತಾಯಿಸಿದರು.
ಕೂಡಲೇ ಪ್ರತಿಕ್ರಿಯಿಸಿದ ನೋಯ್ಡಾ ಟ್ರಾಫಿಕ್ ಪೊಲೀಸರು ಯುವಕನ ಅಜಾಗರೂಕ ವರ್ತನೆಗಾಗಿ ವ್ಯಕ್ತಿಗೆ 33,500 ರೂ. ದಂಡ ವಿಧಿಸಿದ್ದಾರೆ. ಇಂತಹ ಕೃತ್ಯದ ಬಗ್ಗೆ ಯುವಕನ ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಡಿಸಿಪಿ ಅನಿಲ್ ಕುಮಾರ್ ಯಾದವ್ ಖಚಿತಪಡಿಸಿದ್ದಾರೆ.
https://twitter.com/Nishantjournali/status/1803016223069819118?ref_src=twsrc%5Etfw%7Ctwcamp%5Etweetembed%7Ctwterm%5E1803031872680653172%7Ctwgr%5Ec7a47623724923f81e835a4ad70ab56ff5957c66%7Ctwcon%5Es2_&ref_url=https%3A%2F