HomeKarnatakaBREAKING: ಗೋಣಿಕೊಪ್ಪದಲ್ಲಿ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡ ದಿಢೀರ್ ಕುಸಿತ; 6 ಜನರು ಅವಶೇಷಗಳಡಿ ಸಿಲುಕಿರುವ...

BREAKING: ಗೋಣಿಕೊಪ್ಪದಲ್ಲಿ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡ ದಿಢೀರ್ ಕುಸಿತ; 6 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ

ಕೊಡಗು: ಗೋಣಿಕೊಪ್ಪದಲ್ಲಿ ಅಂಬೂರ್ ಬಿರಿಯಾನಿ ಹೋಟೆಲ್ ಕಟ್ಟಡ ಏಕಾಏಕಿ ಕುಸಿದು ಬಿದ್ದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ.

ಎರಡು ಅಂತಸ್ತಿನ ಅಂಬೂರ್ ಬಿರಿಯಾನಿ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಮೂವರನ್ನು ರಕ್ಷಿಸಲಾಗಿದೆ. ಇನ್ನೂ 6 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ಅವರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.

ರಕ್ಷಿಸಲಾಗಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಎನ್ ಡಿಆರ್ ಎಫ್ ತಂಡದಿಂದ ಕಟ್ಟಡದ ಅವಶೇಷಗಳಡಿ ಸಿಲುಕಿದವರ ರಕ್ಷಣೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular