alex Certify ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಚರ್ಚೆ ನಡೆಸಲಾಗಿದ್ದು, ಮುಖ್ಯಮಂತ್ರಿಗಳಿಗೆ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ಅಧಿಕಾರ ನೀಡಲಾಗಿದೆ. ಇದರೊಂದಿಗೆ ಸರ್ಕಾರಿ ನೌಕರರು ಬಹು ದಿನಗಳಿಂದ ನಿರೀಕ್ಷಿಸುತ್ತಿರುವ ಏಳನೇ ವೇತನ ಆಯೋಗ ಜಾರಿ ಮಾಡಬೇಕೆಂಬ ಬಹುದಿನಗಳ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ.

ಶಿಫಾರಸಿನಂತೆ ಶೇಕಡ 25ರಷ್ಟು ವೇತನ ಹೆಚ್ಚಳ ಮಾಡಲು ಕೆಲವು ಸಚಿವರು ಸಲಹೆ ನೀಡಿದ್ದು, ಅಂತಿಮವಾಗಿ ಆಯೋಗದ ಶಿಫಾರಸು ಜಾರಿ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ಸಂಪುಟ ಸಭೆ ನೀಡಿದೆ. ಮುಖ್ಯಮಂತ್ರಿಗಳು ಶೇಕಡ 27ರಷ್ಟು ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...