ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ತಕ್ಕ ಶಾಸ್ತಿ: 20 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.

15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕಾರಿಪುರ ತಾಲೂಕಿನ ನಿವಾಸಿ 23 ವರ್ಷದ ಯುವಕನಿಗೆ ಶಿಕ್ಷೆ ವಿಧಿಸಲಾಗಿದೆ. 2023ರಲ್ಲಿ ಬಾಲಕಿ ಮೇಲೆ ಲೈಂಗಿಕ ಎಸಗಿದ್ದ. ಸಂತ್ರಸ್ತ ಬಾಲಕಿ ಶಿರಾಳಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆಗಿನ ಶಿಕಾರಿಪುರ ಡಿವೈಎಸ್ಪಿ ಶಿವಾನಂದ ಎಸ್. ಮದರಖಂಡಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಲತಾ ಅವರು ಆರೋಪಿ ಯುವಕನಿಗೆ ಶಿಕ್ಷೆ, ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡಕಟ್ಟಲು ವಿಫಲನಾದಲ್ಲಿ ನಾಲ್ಕು ತಿಂಗಳು ಹೆಚ್ಚುವರಿಯಾಗಿ ಸಾದಾ ಶಿಕ್ಷೆ, ದಂಡದ ಮೊತ್ತದಲ್ಲಿ ನೊಂದ ಬಾಲಕಿಗೆ 45,000 ರೂ. ಹಾಗೂ ಸರ್ಕಾರದ ವತಿಯಿಂದ ಆಕೆಗೆ 7 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ವಕೀಲರಾದ ಎಸ್. ಹರಿಪ್ರಸಾದ್ ವಾದ ಮಂಡಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read