ನವದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನಗರದ ರೂಸ್ ಅವೆನ್ಯೂ ನ್ಯಾಯಾಲಯವು ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಇಂದು ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ.
ಮಾರ್ಚ್ ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಅರವಿಂದ್ ಕೇಜ್ರಿವಾಲ್ ಗೆ ರಜಾಕಾಲದ ನ್ಯಾಯಾಧೀಶ ನ್ಯಾಯ್ ಬಿಂದು ಗುರುವಾರ 1,00,000 ರೂ.ಗಳ ಬಾಂಡ್ ಮೇಲೆ ಜಾಮೀನು ನೀಡಿದರು.
ಜಾಮೀನು ಬಾಂಡ್ ಸಲ್ಲಿಸುವ ಪ್ರಕ್ರಿಯೆಯನ್ನು 48 ಗಂಟೆಗಳ ಕಾಲ ಮುಂದೂಡುವಂತೆ ಜಾರಿ ನಿರ್ದೇಶನಾಲಯದ ಮನವಿಯನ್ನು ಸ್ವೀಕರಿಸಲು ರೂಸ್ ಅವೆನ್ಯೂ ನ್ಯಾಯಾಲಯ ನಿರಾಕರಿಸಿದ್ದರಿಂದ, ಇಡಿ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ದೆಹಲಿ ಹೈಕೋರ್ಟ್ ಗೆ ತೀರ್ಪಿನ ವಿರುದ್ಧ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.ಈಗ ರದ್ದುಪಡಿಸಲಾದ ಮದ್ಯ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು.