HomeKarnatakaSSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ: ಇಲ್ಲಿದೆ ಮಾಹಿತಿ

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ: ಇಲ್ಲಿದೆ ಮಾಹಿತಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವತಿಯಿಂದ ಜೂನ್ 25 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ ಆಫೀಸ್, ದಾವಣಗೆರೆ ಇಲ್ಲಿ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿ ಫಾರ್ಮಾ, ಬಿ ಫಾರ್ಮಾ, ಡಿಪ್ಲೊಮಾ, ಹಾಗೂ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಅರ್ಜಿದಾರರು 5 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ನೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ 8105122556, 7483808321, 08192-259446 ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular