alex Certify ಜೂ. 25ರ ವರೆಗೆ ‘ಭಾರೀ ಮಳೆ’ ಹಿನ್ನಲೆ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂ. 25ರ ವರೆಗೆ ‘ಭಾರೀ ಮಳೆ’ ಹಿನ್ನಲೆ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಜೂನ್ 25 ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜೂನ್ 25 ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಮಳೆ ಆಗುವ ಸಂಭವವಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.

ಜೂನ್ 25ರವರೆಗೆ ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದೆ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...