HomeEntertainmentಹುಟ್ಟುಹಬ್ಬದ  ಸಂಭ್ರಮದಲ್ಲಿ ಹಾಸ್ಯನಟ ಚಿಕ್ಕಣ್ಣ

ಹುಟ್ಟುಹಬ್ಬದ  ಸಂಭ್ರಮದಲ್ಲಿ ಹಾಸ್ಯನಟ ಚಿಕ್ಕಣ್ಣ

ಸ್ಯಾಂಡಲ್ವುಡ್ ನ ಖ್ಯಾತ ಹಾಸ್ಯ ಕಲಾವಿದ ಚಿಕ್ಕಣ್ಣ ಇಂದು ತಮ್ಮ 38ನೇ ಹುಟ್ಟುಹಬ್ಬದ  ಸಂಭ್ರಮದಲ್ಲಿದ್ದಾರೆ.

2011ರಲ್ಲಿ ತೆರೆ ಕಂಡ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಿರಾತಕ’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು ಬಳಿಕ 2012ರಂದು ‘ಲಕ್ಕಿ’ ಹಾಗೂ ‘ಮಿಸ್ಟರ್ 420’ ಯಲ್ಲಿ ತೆರೆ ಹಂಚಿಕೊಂಡರು. 2013ರಲ್ಲಿ ‘ರಾಜಾಹುಲಿ’ ಚಿತ್ರದಲ್ಲಿ ಅಭಿನಯಿಸಿದ ಇವರಿಗೆ ಬೆಸ್ಟ್ ಕಾಮಿಡಿಯನ್ ಎಂಬ ಸೈಮ ಅವಾರ್ಡ್ ದೊರೆಯಿತು. ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಬುಲ್ ಬುಲ್’ ಸೇರಿದಂತೆ ‘ವಿಕ್ಟರಿ’ ‘ಅಧ್ಯಕ್ಷ’ ‘ತಿರುಪತಿ ಎಕ್ಸ್ಪ್ರೆಸ್’ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಜನಪ್ರಿಯ ಹಾಸ್ಯ ಕಲಾವಿದರಾಗಿ  ಹೊರಹೊಮ್ಮಿದರು.

ಕನ್ನಡ ಚಿತ್ರರಂಗದ ಬೇಡಿಕೆಯ ಹಾಸ್ಯನಟನಾಗಿರುವ ಚಿಕ್ಕಣ್ಣ ಕಳೆದ ವರ್ಷ ‘ಉಪಾಧ್ಯಕ್ಷ’ ದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಇತ್ತೀಚಿಗೆ ಶರಣ್ ಅಭಿನಯದ ಚೂ ಮಂತರ್ ಚಿತ್ರದ ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular