ಬೆಂಗಳೂರು : ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ, ಹಾಗೂ ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಪ್ರಕರಣದ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ನೀಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಿದೆ.
ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ನೀಡುವ ಬಹುಮಾನವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಏರಿಕೆ ಮಾಡಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.