HomeEntertainmentರಿಲೀಸ್ ಆಯ್ತು 'ಜಿಗರ್' ಟ್ರೈಲರ್

ರಿಲೀಸ್ ಆಯ್ತು ‘ಜಿಗರ್’ ಟ್ರೈಲರ್

ಸೂರಿ ಕುಂದಾರ್ ನಿರ್ದೇಶನದ ಪ್ರವೀಣ್ ತೇಜ್ ನಟನೆಯ ಬಹುನಿರೀಕ್ಷಿತ ‘ಜಿಗರ್’ ಚಿತ್ರದ ಟ್ರೈಲರನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಭರ್ಜರಿ ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.

ಆಕ್ಷನ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಯುಕೆ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಪೂಜಾ ವಸಂತ್ ಕುಮಾರ್ ನಿರ್ಮಾಣ ಮಾಡಿದ್ದು, ಪ್ರವೀಣ್ ತೇಜ್ ಗೆ ಜೋಡಿಯಾಗಿ ವಿಜಯಶ್ರೀ ಕಲ್ಬುರ್ಗಿ ಅಭಿನಯಿಸಿದ್ದಾರೆ. ಜ್ಞಾನೇಶ್ ಬಿ ಮಾತಾಡ್ ಸಂಕಲನ, ಶಿವಸೇನಾ ಛಾಯಾಗ್ರಹಣವಿದೆ. ರಿತ್ವಿಕ್ ಮುರುಳಿಧರ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಮುಂದಿನ ತಿಂಗಳು ಜುಲೈ 5 ರಂದು ಈ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣಲಿದೆ.

For Latest News Updates, Join Our Whatsapp Community🚩
RELATED ARTICLES

Most Popular