HomeKarnatakaALERT : ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ ; ತಂದೆಗೆ 25,000 ದಂಡ ವಿಧಿಸಿದ...

ALERT : ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ ; ತಂದೆಗೆ 25,000 ದಂಡ ವಿಧಿಸಿದ ಕೋರ್ಟ್..!

ಶಿವಮೊಗ್ಗ : ಅಪ್ರಾಪ್ತರಿಗೆ ಬೈಕ್ ಕೊಡಬಾರದು ಎಂದು ಹಲವು ಬಾರಿ ಎಚ್ಚರಿಕೆ ನೀಡಿದರೂ ಕೂಡ ಪೋಷಕರು ಎಚ್ಚೆತ್ತುಕೊಂಡಿಲ್ಲ. ಅಪ್ರಾಪ್ತರಿಗೆ ಬೈಕ್ ಕೊಟ್ಟರೆ 25 ಸಾವಿರಕ್ಕೂ ಹೆಚ್ಚು ದಂಡ ವಿಧಿಸಲಾಗುತ್ತದೆ.

ಇದೀಗ ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ತಂದೆಗೆ ಕೋರ್ಟ್ 25 ಸಾವಿರ ದಂಡ ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಬೈಕ್ ಚಲಾಯಿಸಿದ 17 ವರ್ಷದ ಬಾಲಕ ತೀರ್ಥಹಳ್ಳಿಯವನು ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಟೌನ್ ದೊಡ್ಮನೆ ಕೇರಿ ಬಳಿ ಶಿವಮೊಗ್ಗ ಸಂಚಾರ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಬೈಕ್ ಚಲಾಯಿಸಿಕೊಂಡು ಬಂದ 17 ವರ್ಷದ ಬಾಲಕನನ್ನು ತಪಾಸಣೆ ನಡೆಸಿದಾಗ ಡಿಎಲ್ ಇಲ್ಲದಿರುವುದು ಹಾಗೂ ಆತ ಅಪ್ರಾಪ್ತ ಎಂಬುದು ಬಯಲಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪ್ರಾಪ್ತ ಮಕ್ಕಳ ವಾಹನ ಚಾಲನೆ ಹಾಗೂ ಬೆಂಗಳೂರಿನ ರಸ್ತೆಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಸಂಚಾರಿ ಪೊಲೀಸರು ಪೋಷಕರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular