ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ನ್ನು ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ & ಗ್ಯಾಂಗ್ ಜೈಲು ಪಾಲಾಗಿದೆ.
ಇದರ ನಡುವೆ ದರ್ಶನ್ ಮತ್ತು ಸಹಚರರನ್ನು ಪ್ರತ್ಯೇಕ ಜೈಲಿನಲ್ಲಿ ಇರಿಸುವಂತೆ ಎಸ್ ಪಿ ಪಿ ಮನವಿ ಮಾಡಿದ್ದಾರೆ. ಎಲ್ಲಾ ಆರೋಪಿಗಳು ಒಂದೇ ಕಡೆಯಿದ್ರೆ ಸಾಕ್ಷಿ ನಾಶ ಮಾಡುವ ಸಾಧ್ಯತೆಯಿದೆ. ಆದ್ದರಿಂದ ದರ್ಶನ್ & ಗ್ಯಾಂಗ್ ನ್ನು ಪ್ರತ್ಯೇಕ ಜೈಲಿನಲ್ಲಿ ಇರಿಸುವಂತೆ ಮನವಿ ಮಾಡಲಾಗಿದೆ. ಆದರೆ ಇದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದು, ಕೋರ್ಟ್ ಸೋಮವಾರಕ್ಕೆ ವಿಚಾರಣೆ ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಡಿ ಬಾಸ್ ಗ್ಯಾಂಗ್ ಗೆ ಜೈಲೂಟ ಫಿಕ್ಸ್ ಆಗಿದ್ದು, ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗುತ್ತಿದೆ.