alex Certify ಜೂನ್ 24 ರಂದು 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್ 24 ರಂದು 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ನಡೆಯಲಿದೆ.

ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ ಭರ್ತೃಹರಿ ಮಹತಾಬ್ ಅವರು ಹೊಸದಾಗಿ ಆಯ್ಕೆಯಾದ ಲೋಕಸಭೆ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಇದೇ ತಿಂಗಳ 26 ರಂದು ನಡೆಯಲಿದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜ್ಯಸಭೆಯ ಅಧಿವೇಶನ ಇದೇ 27ರಂದು ಆರಂಭವಾಗಲಿದೆ. ಮುಂದಿನ ತಿಂಗಳು 3ರಂದು ಸಂಸತ್ ಅಧಿವೇಶನ ಮುಕ್ತಾಯವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...