ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 3 ಜೂನ್ 24 ರಿಂದ ಜುಲೈ 7ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ.
ದ್ವಿತೀಯ ಪಿಯುಸಿ ಪರೀಕ್ಷೆ 3ಗೆ 44,358 ವಿದ್ಯಾರ್ಥಿಗಳು, 31,637 ವಿದ್ಯಾರ್ಥಿನಿಯರು ಸೇರಿ 75,995 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 248 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಕೇಂದ್ರಗಳಲ್ಲಿಯೂ ಸಿಸಿಟಿವಿ ಅಳವಡಿಸಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ವಿಚಕ್ಷಣ ದಳ ರಚಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರಲ್ಲಿ ಅನುತ್ತೀರ್ಣರಾದವರು, ಫಲಿತಾಂಶ ಸುಧಾರಣೆ ಬಯಸುವ ವಿದ್ಯಾರ್ಥಿಗಳು ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಉಚಿತ ಪ್ರಯಾಣಕ್ಕೆ ಅವಕಾಶ
ದ್ವಿತೀಯ ಪಿಯುಸಿ ಪರೀಕ್ಷೆ 3ಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ದಿನಗಳಂದು ಕೆ.ಎಸ್.ಆರ್.ಟಿ.ಸಿ. ಮತ್ತು ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು.