HomeKarnatakaಪರಶುರಾಮನ ನಕಲಿ ಮೂರ್ತಿ ನಿರ್ಮಾಣ: ಪ್ರಕರಣ ದಾಖಲು

ಪರಶುರಾಮನ ನಕಲಿ ಮೂರ್ತಿ ನಿರ್ಮಾಣ: ಪ್ರಕರಣ ದಾಖಲು

ಉಡುಪಿ: ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಮೂರ್ತಿ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಚಿನ ಪರಶುರಾಮನ ಮೂರ್ತಿ ಮಾಡಿಕೊಡಲು 1.25 ಕೋಟಿ ರೂಪಾಯಿ ಪಡೆದು ನಕಲಿ ಮೂರ್ತಿಯನ್ನು ಮಾಡಿ ಕೊಟ್ಟು ಮೋಸ ಮಾಡಿದ್ದಾರೆ ಎಂಬ ಆರೋಪದಡಿ ಕೃಷ್ಣ ಆರ್ಟ್ ವರ್ಲ್ಡ್ ನ ಕೃಷ್ಣ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.

ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದುಕೊಂಡು ಕೃಷ್ಣ ಅವರು ಸರ್ಕಾರಕ್ಕೆ ವಂಚಿಸಿದ್ದಾರೆ ಎಂದು ನಲ್ಲೂರು ಗ್ರಾಮದ ಕೃಷ್ಣ ಎಂಬುವರು ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular