HomeKarnatakaನೇಣಿಗೆ ಶರಣಾದ ಪೊಲೀಸ್ ಕಾನ್ಸ್ ಟೇಬಲ್

ನೇಣಿಗೆ ಶರಣಾದ ಪೊಲೀಸ್ ಕಾನ್ಸ್ ಟೇಬಲ್

ಕಲಬುರ್ಗಿ: ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಜಮೀನಿನಲ್ಲಿ ನೇಣಿಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಉದನೂರು ರಸ್ತೆ ಬಳಿ ನಡೆದಿದೆ.

ದೊಡ್ಡೇಶ್ (40) ಆತ್ಮಹತ್ಯೆಗೆ ಶರಣಾದ ಕಾನ್ಸ್ ಟೇಬಲ್. ಮಾಡಬೂಳ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಕಲಬುರ್ಗಿಯ ಹೈಕೋರ್ಟ್ ಬಳಿ ದೊಡ್ಡೇಶ್ ವಾಸವಾಗಿದ್ದರು. ಏಕಾಏಕಿ ಕಲಬುರ್ಗಿ ನಗರದ ಉದನೂರು ರಸ್ತೆ ಬಳಿಯ ಜಮೀನಿನಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಕಾನ್ಸ್ ಟೇಬಲ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುಲಬುರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular