ಕೊಡಗು: ಮಳೆಗಾಲ ಆರಂಭ ಜೊತೆಗೆ ವೀಕೆಂಡ್ ಹಿನ್ನೆಲೆಯಲ್ಲಿ ಕೊಡಗಿನ ಪ್ರಕೃತಿ ಸೌಂದರ್ಯ ನೋಡಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಬಂದವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಸೋಮವಾರ ಪೇಟೆ ತಾಲೂಕಿನ ಕೋಟೆಬೆಟ್ಟ ರಸ್ತೆಯಲ್ಲಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಪುತ್ತೂರಿನಿಂದ ಕೊಡಗಿಗೆ ಬಂದಿದ್ದ ಕುಟುಂಬದ ಕಾರು ತಡೆದ ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಹಲ್ಲೆ ನಡೆಸಿದ್ದಾರೆ. ಮನಬಂದಂತೆ ಹೊಡೆದಿದ್ದಾರೆ. ದುಷ್ಕರ್ಮಿಗಳ ಅಟ್ಟಹಾಸವನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದ್ದಾರೆ.
ಹಲ್ಲೆ ಬಳಿಕ ಪುಂಡರು ಸ್ಥಳದಲ್ಲೇ ಬೈಕ್ ಬಿಟ್ಟು ಪರಾರಿಯಾಗಿದ್ದು, ಹಲ್ಲೆಗೊಳಗಾದ ಪ್ರವಾಸಿಗರು ಮಾದಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.