HomeKarnatakaದರ್ಶನ್ ರನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡ ಸುಮಲತಾ ಇನ್ನೂ ಮೌನವೇಕೆ?: ನಟ ಚೇತನ್ ಪ್ರಶ್ನೆ

ದರ್ಶನ್ ರನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡ ಸುಮಲತಾ ಇನ್ನೂ ಮೌನವೇಕೆ?: ನಟ ಚೇತನ್ ಪ್ರಶ್ನೆ

ನಟ ದರ್ಶನ್‌ ಅವರನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡ ಸುಮಲತಾ ಅವರು ಇನ್ನೂ ಮೌನವಾಗಿರುವುದೇಕೆ? ಎಂದು ನಟ ಚೇತನ್ ಮತ್ತೆ ಪ್ರಶ್ನಿಸಿದ್ದಾರೆ.

ರಾಜಕೀಯ ಲಾಭಕ್ಕೆ ದರ್ಶನ್ ಸ್ಟಾರ್ ಪವರ್ ಬಳಸಿದ ಸುಮಲತಾ ಅಂಬರೀಶ್ ಅವರು ಈ ಪ್ರಕರಣದಲ್ಲಿ ಮೌನವಾಗಿರುವ ಬಗ್ಗೆ ಚೇತನ್ ಈ ಹಿಂದೆಯೇ ಪ್ರಶ್ನಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ತನ್ನ ರಾಜಕೀಯ ಲಾಭಕ್ಕಾಗಿ ದರ್ಶನ್ ಅವರ ಸ್ಟಾರ್ ಪವರ್ ಬಳಸಿದ ಸುಮಲತಾ ಅಂಬರೀಶ್ ಅವರು ತಮ್ಮ ಹಿರಿಯ ಮಗ ಎಂದು ದರ್ಶನ್ ಅವರನ್ನು ಕರೆದಿದ್ದರು. ತಮ್ಮ ಮಗನ ಇತ್ತೀಚಿನ ಘಟನೆಗಳ ಬಗ್ಗೆ ಸುಮಲತಾ ಅಂಬರೀಶ್ ಏನು ಹೇಳುತ್ತಾರೆ? ತಲೆ ಮರೆಸಿಕೊಳ್ಳುವುದು ಒಂದು ಆಯ್ಕೆಯಾಗಿರಬಾರದು ಎಂದು ಟ್ವೀಟ್ ಮಾಡಿದ್ದರು.

ಇದೀಗ ಮತ್ತೆ ಅವರು ದರ್ಶನ್ ಪ್ರಕರಣದ ಬಗ್ಗೆ ಸುಮಲತಾ ಅಂಬರೀಶ್ ಅವರ ಮೌನವನ್ನು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular