alex Certify ಚಿಕಮಗಳೂರು ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕಮಗಳೂರು ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ನಿಷೇಧ

ಚಿಕಮಗಳೂರು: ಚಿಕ್ಕಮಗಳೂರಿನ ಹಲವೆಡೆ ಚಾರಣಕ್ಕೆ ನಿಷೇಧ ಹೇರಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಪ್ಲಾಸ್ಟಿಕ್ ನಿಷೇಧ ಮಾಡಿ ಕ್ರಮ ಕೈಗೊಂಡಿದೆ.

ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ತೆರಳುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಅದರಲ್ಲಿಯೂ ವೀಕೆಂಡ್ ಗಳಲ್ಲಿ ಪ್ರವಾಸಿಗರ ಸಂಖ್ಯೆ ನಿಯಂತ್ರಿಸುವುದೇ ಕಷ್ಟಸಾಧ್ಯವಾಗಿದೆ. ಅಲ್ಲದೇ ಎಲ್ಲೆಂದರಲ್ಲಿ ಪ್ರವಾಸಿಗರು ಪ್ಲಾಸ್ಟಿಕ್, ಬಾಟಲ್ ಗಳು ಸೇರಿದಂತೆ ವಸ್ತುಗಳನ್ನು ಬಿಸಾಕಿ ಹೋಗುತ್ತಿರುವುದು ಗಮನಕ್ಕೆ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಳೂರಿನ ಪ್ರವಾಸಿ ತಾಣ, ಪಶ್ಚಿಮ ಘಟ್ಟಗಳ ಸಾಲಿಗೆ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿಗೆ ಸಾವಿರು ಸಂಖ್ಯೆಯಲ್ಲಿ ಭೇಟಿ ನೀಡುವ ಪ್ರವಾಸಿಗರು ಪ್ಲಾಸ್ಟಿಕ್ ವಸ್ತುಗಳನ್ನು ಕೊಂಡೊಯ್ಯುತ್ತಿದ್ದಾರೆ. ಇದರಿಂದ ಪರಿಸರಕ್ಕೆ ತೊಂದರೆಯಾಗುತ್ತಿದ್ದು, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬ್ಯಾಗ್, ಕವರ್, ಬಾಟಲ್ ಗಳು ಬಿದ್ದಿರುವುದು ಅರಣ್ಯ ಇಲಾಖೆಗೂ ಸಮಸ್ಯೆಯಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿಯಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಿಸಲಾಗಿದೆ.

ಪ್ಲಾಸ್ಟಿಕ್ ನಿಷೇಧ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಗಳಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಪ್ಲಾಸ್ಟಿಕ್ ವಸ್ತುಗಳು ಕಂಡುಬಂದಲ್ಲಿ ಸೀಜ್ ಮಾಡಲಾಗುತ್ತಿದೆ. ಪಶ್ಚಿಮ ಘಟ್ಟಗಳ ಸಾಲು ಹಾಗೂ ರಾಜ್ಯದ ಪ್ರವಾಸಿ ತಾಣಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...