HomeKarnatakaBREAKING NEWS: ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

BREAKING NEWS: ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಕಲಬುರಗಿ: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇತ್ತೀಚೆಗೆ ಬಾಂಬ್ ಬೆದರಿಕೆ ಹಾಕಲಾದ ಬೆನ್ನಲ್ಲೇ ಇದೀಗ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಏರ್ ಪೋರ್ಟ್ ಸಿಬ್ಬಂದಿಗಳು, ಪ್ರಯಾಣಿಕರು ಆತಂಕಕ್ಕೀಡಾಗಿದ್ದಾರೆ.

ಅನಾಮಧೇಯ ವ್ಯಕ್ತಿಯೊಬ್ಬ ಇ-ಮೇಲ್ ಕಳುಹಿಸಿದ್ದು, ಏರ್ ಪೋರ್ಟ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿಯೊಬ್ಬ ಪ್ರಯಾಣಿಕರ ಬ್ಯಾಗ್ ಗಳನ್ನು ತಪಾಸಣೆ ನಡೆಸಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಕಟೆಚ್ಚರ ವಹಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular