HomeKarnatakaBe Alert : ಎಚ್ಚರ...! ಇನ್ಮೇಲೆ ತಮಾಷೆಗೆ 112 ಗೆ ಕರೆ ಮಾಡಿದ್ರೆ ಕಠಿಣ ಕಾನೂನು...

Be Alert : ಎಚ್ಚರ…! ಇನ್ಮೇಲೆ ತಮಾಷೆಗೆ 112 ಗೆ ಕರೆ ಮಾಡಿದ್ರೆ ಕಠಿಣ ಕಾನೂನು ಕ್ರಮ..!

ಬೆಂಗಳೂರು :   112 ಸಹಾಯವಾಣಿಗೆ ಅನಗತ್ಯ ಕರೆಗಳು ಬರುತ್ತಿರುವುದು ಹೆಚ್ಚಾಗಿದೆ. ಸಕಾರಣವಿಲ್ಲದೇ ಕರೆ ಮಾಡಿ ಸಣ್ಣ-ಪುಟ್ಟ ವಿಚಾರಕ್ಕೆ ಹೊಯ್ಸಳ ಸಿಬ್ಬಂದಿಯನ್ನು ಕರೆಸಿಕೊಂಡು ಕಮಾಂಡ್ ಸೆಂಟರ್ ಮತ್ತು ಹೊಯ್ಸಳ ಸಿಬ್ಬಂದಿಯ ಕಾಲಹರಣ ಮಾಡುವಾಗ ನಿಜವಾಗಿಯೂ ಸಮಸ್ಯೆಯಲ್ಲಿ ಇರುವವರಿಗೆ ನೆರವು ಸಿಗದೇ ಅವರು ಅಪಾಯದಲ್ಲಿ ಸಿಲುಕುವ ಸಾಧ್ಯತೆ ಇದೆ.

ನೀವು ಟೈಂಪಾಸ್ ಮಾಡುವ ಸಮಯದಲ್ಲಿ ಒಂದು ಜೀವ ಹೋಗಬಹುದಾದ ಸಂಭವ ಇರುತ್ತದೆ. ಯಾರೋ ಆತ್ಮಹತ್ಯೆಗೆ ಯತ್ನಿಸಿರಬಹುದು, ಅಮಾಯಕರ ಮೇಲೆ ರೌಡಿಗಳು ಹಲ್ಲೆಗೆ ಮುಂದಾಗಿರಬಹುದು. ಸಕಾಲದಲ್ಲಿ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋದರೆ ಅವರ ಜೀವ ಉಳಿಸಬಹುದಾಗಿದೆ. ಹೀಗಾಗಿ ಹುಡುಗಾಟಿಕೆಗೆ 112ಕ್ಕೆ ಕರೆ ಮಾಡುವುದನ್ನು ನಿಲ್ಲಿಸಿ.

ಇನ್ನು ಮುಂದೆ ಈ ರೀತಿಯ ಅನಗತ್ಯ ಕರೆಗಳು ಬಂದಲ್ಲಿ ಅಂತಹ ನಂಬರ್ ಅನ್ನು ತಾತ್ಕಾಲಿಕವಾಗಿ 24 ಗಂಟೆ ಬ್ಲಾಕ್ ಮಾಡಲಾಗುತ್ತದೆ. ಪದೇ ಪದೇ ಫ್ರಾಡ್ ಕಾಲ್ ಮಾಡುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular