HomeKarnatakaRain in Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ...

Rain in Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ..!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಬಾಗಲಕೋಟೆ, ಗದಗ, ದಾವಣಗೆರೆ, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆ ಆಗುಂಬೆ ಸೇರಿದಂತೆ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular