ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕಾಲೇಜುಗಳ ಲ್ಯಾಟರಲ್ ಪ್ರವೇಶಕ್ಕೆ ನಡೆಸಿದ್ದ ಪ್ರವೇಶ ಪರೀಕ್ಷೆಯ (ಡಿಸಿಇಟಿ) ಸರಿ ಉತ್ತರ ಪ್ರಕಟಿಸಿದೆ.
ಉತ್ತರವನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಜೂನ್ 26ರ ಬೆಳಗ್ಗೆ 11 ಗಂಟೆಯ ಒಳಗೆ ಸಲ್ಲಿಸಬಹುದು. ವರ್ಷನ್ ಕೋಡ್, ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆ ಸಂಖ್ಯೆಯ ವಿವರಗಳನ್ನು ನಮೂದಿಸಿ, ಅದಕ್ಕೆ ಪೂರಕ ಸಮರ್ಥನೆಗಳನ್ನು ಪಿಡಿಎಫ್ ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೆ ಅಥವಾ ಆಧಾರ ರಹಿತವಾಗಿ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿದೆ.
#DCET– 2024 ಪರೀಕ್ಷೆ ಮುಗಿದಿದ್ದು ತಾತ್ಕಾಲಿಕ ಸರಿ ಉತ್ತರಗಳನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಜೂನ್ 26ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು. ಈ ವಿಷಯದಲ್ಲಿ ವಿಜಯ ತಜ್ಞರ ಸಮಿತಿ ನಿರ್ಧರಿಸಿ, ನೀಡುವ ಕೀ ಉತ್ತರಗಳು ಅಂತಿಮವಾಗಿರುತ್ತದೆ.@CMofKarnataka @drmcsudhakar pic.twitter.com/WgkhXbGjRg
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) June 24, 2024

