HomeAgricultureರೈತರೇ ಗಮನಿಸಿ : 'ಫಸಲ್ ಭೀಮಾ' ಬೆಳೆ ವಿಮೆ ನೋಂದಣಿಗೆ ಆಹ್ವಾನ

ರೈತರೇ ಗಮನಿಸಿ : ‘ಫಸಲ್ ಭೀಮಾ’ ಬೆಳೆ ವಿಮೆ ನೋಂದಣಿಗೆ ಆಹ್ವಾನ

ಬಳ್ಳಾರಿ : ಕೃಷಿ ಇಲಾಖೆ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳ ವಿಮೆ ನೋಂದಣಿಗೆ ನೋಂದಾಯಿಸಿಕೊಳ್ಳಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ತಿಳಿಸಿದ್ದಾರೆ.

ರೈತರು ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ಕಡಲೆ, ಕುಸುಬೆ ಮುಂತಾದ ಬೆಳೆಗಳಿಗೆ ರೈತರು ಬೆಳೆ ವಿಮೆ ಮಾಡಿಸಿಕೊಳ್ಳಬಹುದು. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ವಿಮಾ ಯೋಜನೆಯಿಂದ ಬಹಳಷ್ಟು ಅನುಕೂಲವಾಗಲಿದೆ.

ಬೆಳೆ ವಿಮೆ ನೋಂದಣಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ತಮ್ಮ ವ್ಯವಹಾರದ ಬ್ಯಾಂಕ್ಗಳಿಗೆ ಭೇಟಿ ನೀಡಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ವಿಮಾ ಸಂಸ್ಥೆಯ ತಾಲೂಕು ಪ್ರತಿನಿಧಿಗೆ (8277472721) ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular